ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಕರ್ನಾಟಕ ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹಾಗೂ ಪೋಷಕರ ಕಾಯುವಿಕೆ ಕೊನೆಗೂ ಮುಕ್ತಾಯ.
ಹೌದು 2026ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಯ ದಿನಾಂಕ ಮತ್ತು ಸಮಯವನ್ನು ನಿಗದಿ ಮಾಡಲಾಗಿದೆ.
ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ SSLC ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ 23, 2026 ರಂದು ಬಿಡುಗಡೆ ಮಾಡಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ (KSEAB) ಈ ಕುರಿತು ಅಧಿಕೃತ ಮಾಹಿತಿ ದೊರೆತಿದೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೂ ಸಹ ಇದನ್ನು ಖಚಿತಡಿಸಿದ್ದಾರೆ. .
ಹಿಂದಿ ವಿಷಯದ ಗ್ರೇಡಿಂಗ್ ಕುರಿತಾಗಿ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ವಿಳಂಬವಾಗಬಹುದು ಎಂಬೆಲ್ಲಾ ಊಹಾಪೋಹಗಳಿಗೆ ಇದೀಗ ಬ್ರೇಕ್.
ನಿಗದಿತ ಸಮಯಕ್ಕೇ ಫಲಿತಾಂಶ ಹೊರಬೀಳುತ್ತಿದೆ.
Karnataka SSLC Result 2026 Date and Time:
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಣೆಯಾವಾಗ?
ಉತ್ತರ ->> ನಾಳೆ, ಅಂದರೆ ಗುರುವಾರ (ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಬಿಡುಗಡೆಯಾಗಲಿದೆ.
ಮೊಬೈಲ್‌ಗೇ ಬರಲಿದೆ ರಿಸಲ್ಟ್
ಹೌದು ಈ ಬಾರಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಕೆಲವು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. ಫಲಿತಾಂಶ ಪ್ರಕಟವಾದ ತಕ್ಷಣ, ಮಂಡಳಿಯಲ್ಲಿ ನೋಂದಾಯಿಸಿರುವ ಪೋಷಕರ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ (SMS) ಹಾಗೂ ವಾಟ್ಸಾಪ್ (WhatsApp) ಮೂಲಕ ನೇರವಾಗಿ ಫಲಿತಾಂಶವನ್ನು ವೀಕ್ಷಿಸಬಹುದು .
ಡಿಜಿಲಾಕರ್ ನಲ್ಲಿ ಫಲಿತಾಂಶ ಲಭ್ಯ
ಹೌದು , ಈ ವರ್ಷ ಪ್ರಥಮ ಬಾರಿಗೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು (Marks Card) ‘ಡಿಜಿಲಾಕರ್’ (DigiLocker) ತಂತ್ರಾಂಶದಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.
ಮಧ್ಯಾಹ್ನ 12 ಗಂಟೆಯ ನಂತರ ವಿದ್ಯಾರ್ಥಿಗಳು ಡಿಜಿಲಾಕರ್ ನ ವೆಬ್‌ಸೈಟ್ ಅಥವಾ ಆ್ಯಪ್ ಮೂಲಕ ತಮ್ಮ ಡಿಜಿಟಲ್ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ .
‘ಕರ್ನಾಟಕ ಒನ್’ (KarnatakaOne) ಆ್ಯಪ್ ಮೂಲಕವೂ ಫಲಿತಾಂಶ ವೀಕ್ಷಣೆಗೆ ಅವಕಾಶ ನೀಡಲಾಗಿದೆ .
ರಾಜ್ಯದಲ್ಲಿ ಈಗ ಸುಧಾರಿತ ಪರೀಕ್ಷಾ ಪದ್ಧತಿ ಜಾರಿಯಲ್ಲಿದ್ದೆ.
ಹೌದು ಪರೀಕ್ಷೆ-2 ಮತ್ತು ಪರೀಕ್ಷೆ-3ರ ಮೂಲಕ ಮತ್ತೆ ಪರೀಕ್ಷೆ ಬರೆದು ಅಂಕಗಳನ್ನು ಹೆಚ್ಚಿಸಿಕೊಳ್ಳಲು ಸುವರ್ಣ ಅವಕಾಶವಿದೆ” ಎಂದು ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.
How to Check SSLC Result 2026:
ಮೊದಲು ಕರ್ನಾಟಕ ಸರ್ಕಾರದ ಅಧಿಕೃತ ಫಲಿತಾಂಶದ ವೆಬ್‌ಸೈಟ್‌ಗಳಾದ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಿ.
ಮುಖಪುಟದಲ್ಲಿ ಕಾಣುವ ‘SSLC Examination-1 Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಹಾಲ್ ಟಿಕೆಟ್‌ನಲ್ಲಿರುವ ಪರೀಕ್ಷಾ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (Date of Birth) ನಮೂದಿಸಿ.
‘Submit’ ಬಟನ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಫಲಿತಾಂಶ ಪರದೆಯ ಮೇಲೆ ಮೂಡುತ್ತದೆ.
ಭವಿಷ್ಯದ ದಾಖಲೆಗಾಗಿ ಫಲಿತಾಂಶದ ಪ್ರತಿಯನ್ನು ಪ್ರಿಂಟ್ ಅಥವಾ ಪಿಡಿಎಫ್ (PDF) ರೂಪದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಿ.
How to Check SSLC Result 2026:
1) ಮೊದಲು ಕರ್ನಾಟಕ ಸರ್ಕಾರದ ಅಧಿಕೃತ ಫಲಿತಾಂಶದ ವೆಬ್‌ಸೈಟ್‌ಗಳಾದ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಿ.
2) ಮುಖಪುಟದಲ್ಲಿ ಕಾಣುವ ‘SSLC Examination-1 Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
3) ನಿಮ್ಮ ಹಾಲ್ ಟಿಕೆಟ್‌ನಲ್ಲಿರುವ ಪರೀಕ್ಷಾ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (Date of Birth) ನಮೂದಿಸಿ.
4)ಸುಭ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಫಲಿತಾಂಶ ಪರದೆಯ ಮೇಲೆ ಮೂಡುತ್ತದೆ.
ಭವಿಷ್ಯದ ದಾಖಲೆಗಾಗಿ ಫಲಿತಾಂಶದ ಪ್ರತಿಯನ್ನು ಪ್ರಿಂಟ್ ಅಥವಾ ಪಿಡಿಎಫ್ (PDF) ರೂಪದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಿ.
Check SSLC Result 2026/ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್
| Direct Link For SSLC Result 2026/ಎಸ್‌ಎಸ್‌ಎಲ್‌ಸಿ ಫಲಿತಾಂಶ ಚೆಕ್ಕ್ ಮಾಡುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| Official website/ಅಧಿಕೃತ ಜಾಲತಾಣ | kseab.karnataka.gov.in |
ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ಇವತ್ತು ಮಧ್ಯಾಹ್ನ 3 ಗಂಟೆಗೆ ಬಿಡುಗಡೆ ಯಾಗಲಿದೆ
ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ದಿನಾಂಕ ಫಿಕ್ಸ್
ಹೌದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮಾಹಿತಿ ನೀಡಿದೆ
ಏಪ್ರಿಲ್ 09 ರಂದು ಮದ್ಯಹ್ನ 3ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಲ್ಲಾ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ವೀಕ್ಷಿಸಬಹುದು.
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 07 ರಂದು ಬಿಡುಗಡೆ ಮಾಡಬೇಕಿತ್ತು ಆದರೆ ಚುನಾವಣೆ ನೀತಿ ಸಂಹಿತೆ ಹಾಗೂ ಆಡಳಿತಾತ್ಮಕ ಕಾರಣಗಳಿಂದಾಗಿ ಮುಂದೂಡಲಾಗಿತ್ತು.
Karnataka 2nd PUC SSLC Result 2026 Expected Date: ಪಿಯುಸಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಣೆ ದಿನಾಂಕ ಯಾವಾಗ ಇದರ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ
ಶಬರಿ ಹೇಗೆ ರಾಮನ ಬರುವಿಗಾಗಿ ಕಾಯತಿದಳೋ ಅದೇ ರೀತಿ ನಮ್ಮ 12ನೇ ತರಗತಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ಫಲಿತಾಂಶ ವೀಕ್ಷಿಸಲು ಕಾಯುತಿದಾರೆ.
ಎಲ್ಲಾ ವಿದ್ಯಾರ್ಥಿಗಳು
.ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಆಲ್ ದಿ ಬೆಸ್ಟ್.
ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ.
ಹೌದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮಾಹಿತಿ ನೀಡಿದೆ
ಏಪ್ರಿಲ್ 09 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಈಗಾಗಲೇ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಮೌಲ್ಯಮಾಪನ ಕಾರ್ಯ ಸಾಗುತ್ತಿದ್ದು, ಫಲಿತಾಂಶ ಪ್ರಕಟಣೆಯ ತಯಾರಿಯು ನಡೆಯುತ್ತಿದೆ.
ಹಾಗಾದರೆ, ಯಾವ ಪರೀಕ್ಷೆಯ ಫಲಿತಾಂಶ ಯಾವಾಗ ಬರಲಿದೆ? ಮೌಲ್ಯಮಾಪನ ಪ್ರಕ್ರಿಯೆ ಯಾವ ಹಂತದಲ್ಲಿದೆ? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಪ್ರಕಟ ಫಿಕ್ಸ್
ಏಪ್ರಿಲ್ 07 ರಂದು ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಮುಂದೂಡಲು ಕಾರಣ
ಚುನಾವಣೆ ನೀತಿ ಸಂಹಿತೆ ಹಾಗೂ ಆಡಳಿತಾತ್ಮಕ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ(KSEAB) ಅಧ್ಯಕ್ಷರಾದ ಪ್ರಕಾಶ್ ನಿಟ್ಟಾಲಿ ಅವರು ಹೇಳಿದ್ದರು.

ಏಪ್ರಿಲ್ 09 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ತಿಳಿಸಿದೆ.
ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆದಿದ್ದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಇದೇ ಏಪ್ರಿಲ್ 7 ರಂದು ಪ್ರಕಟವಾಗುವ ಸಾಧ್ಯತೆ ಇತ್ತು ಕಾರಣತರಗಳಿಂದ ಮುಂದೂಡಲಾಗಿದೆ
ರಾಜ್ಯಾದ್ಯಂತ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ PUC ಪರೀಕ್ಷೆ ಬರೆದಿದ್ದು.
ಮಾರ್ಚ್ 20 ರಿಂದಲೇ ಆರಂಭವಾಗಿದ್ದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಈಗ ಬಹುತೇಕ ಪೂರ್ಣಗೊಂಡಿದೆ.
ಶಿಕ್ಷಣ ಇಲಾಖೆ ಶೀಘ್ರದಲ್ಲೇ ಅಧಿಕೃತ ದಿನಾಂಕ ಮತ್ತು ಸಮಯವನ್ನು ಪ್ರಕಟಿಸಲಿದ್ದು, ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ನೋಡಬಹುದು.
ಏಪ್ರಿಲ್ 24ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಾಧ್ಯತೆ ?:
ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷೆ-1 ಬುಧವಾರವಷ್ಟೇ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ಬಾರಿ ಬರೋಬ್ಬರಿ 8.65 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಅದರಲ್ಲಿ ಸುಮಾರು 8.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ , ಶೇ. 2 ರಿಂದ 3 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿದೆ.
ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು (ಏಪ್ರಿಲ್ 5) ಶುರುವಾಗಲಿದ್ದು, ಏಪ್ರಿಲ್ 20 ರವರೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯಲಿದೆ.
ಮೌಲ್ಯಮಾಪನ ಮುಗಿದ ನಂತರ, ಏಪ್ರಿಲ್ 24 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಫಲಿತಾಂಶವನ್ನು ಪ್ರಕಟಿಸಲು ಇಲಾಖೆ ಸಕಲ ಸಿದ್ಧತೆ ನಡೆಸಿದೆ.
2nd PUC SSLC Result 2026 Karnataka Link:
karresults.nic.in
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ:
ಹೊಸ ನಿಯಮದ ಪ್ರಕಾರ, ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗದ ಅಥವಾ ತಮ್ಮ ಅಂಕಗಳನ್ನು ಸುಧಾರಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ‘ಪರೀಕ್ಷೆ-2’ ಬರೆಯುವ ಅತ್ಯುತ್ತಮ ಅವಕಾಶ ಇದೆ ದೆ.
ಈ ಪರೀಕ್ಷೆ-2 ಅನ್ನು ಮೇ 18 ರಿಂದ ಮೇ 25 ರವರೆಗೆ ನಡೆಸಲು ಮಂಡಳಿಯು ತೀರ್ಮಾನಿಸಲಾಗಿದೆ ದೆ.
ಇದರ ಫಲಿತಾಂಶವು ಜೂನ್ 1 ರಂದು ಪ್ರಕಟವಾಗುವ ಸಾಧ್ಯತೆಯಿದ್ದು, ವಿಷಯವಾರು ಸವಿಸ್ತಾರವಾದ ವೇಳಾಪಟ್ಟಿಯನ್ನು ಮಂಡಳಿಯು ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸಲಿ
ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಆಲ್ ದಿ ಬೆಸ್ಟ್. ನೆನಪಿರಲಿ, ಅಂಕಗಳೇ ಜೀವನದ ಅಂತಿಮ ನಿರ್ಧಾರಕವಲ್ಲ. ಫಲಿತಾಂಶ ಏನೇ ಬಂದರೂ ಅದನ್ನು ಧೈರ್ಯವಾಗಿ ಸ್ವೀಕರಿಸಿ. ಒಂದು ವೇಳೆ ಅಂಕ ಕಡಿಮೆಯಾದರೆ ಚಿಂತಿಸುವ ಅಗತ್ಯವಿಲ್ಲ.
ಏಕೆಂದರೆ, ಅಂಕ ಸುಧಾರಿಸಿಕೊಳ್ಳಲು ‘ಪರೀಕ್ಷೆ-2’ ಮತ್ತು ‘ಪರೀಕ್ಷೆ-3’ ರಂತಹ ಅದ್ಭುತ ಅವಕಾಶಗಳು ಈಗ ನಿಮ್ಮ ಮುಂದಿವೆ. ಫಲಿತಾಂಶದ ಸಮಯದಲ್ಲಿ ಪೋಷಕರು ಕೂಡ ಮಕ್ಕಳ ಬೆನ್ನಿಗೆ ನಿಂತು ಧೈರ್ಯ ತುಂಬುವ ಕೆಲಸ ಮಾಡಬೇಕು, ಇತರರೊಂದಿಗೆ ಹೋಲಿಕೆ ಮಾಡಿ ಮಕ್ಕಳ ಮನಸ್ಸನ್ನು ಘಾಸಿಗೊಳಿಸಬಾರದು.
ಇದ್ದನು ಸಹ ಓದಿ
- ದ್ವಿತೀಯ ಪಿಯುಸಿ ವೆಬ್‌ಸೈಟ್ ಸರ್ವರ್ ಡೌನ್ ಆದಾಗ ಟೆನ್ಷನ್ ಇಲ್ಲದೆ ರಿಸಲ್ಟ್ ನೋಡುವ ಸುಲಭ ವಿಧಾನ 2026/- ಇಲ್ಲಿ ಕ್ಲಿಕ್ ಮಾಡಿ